ರಾಜ್ಯದಲ್ಲಿ ಖಾಲಿ ಇರುವ 1005 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ - Jnanavani

ರಾಜ್ಯದಲ್ಲಿ ಖಾಲಿ ಇರುವ 1005 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ



ಕರ್ನಾಟಕ ರಾಜ್ಯದ, ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 1005 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ (ಪುರುಷ) (ಸಿಎಆರ್/ಡಿಎಆರ್) ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಆನ್ ಲಾನ್ ಮೂಲಕವೇ ದಿನಾಂಕ 20-05-2020ರಿಂದ ಸಲ್ಲಿಸಬಹುದಾಗಿದೆ.

ಈ ಕುರಿತಂತೆ ಕರ್ನಾಟಕ ರಾಜ್ಯಪತ್ರ ಹೊರಡಿಸಿದ್ದು, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ (ಪುರುಷ) ( ಸಿಎಆರ್/ಡಿಎಆರ್) 1005 ಹುದ್ದೆಗಳಿಗೆ ಪೊಲೀಸ್ ಇಲಾಖೆ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ. ಆರ್ಜಿಯನ್ನು ಇಲಾಖೆಯ ಅಧಿಕೃತ ವೆಬ್ ಸೈಟ್ www.ksp.gov.in ನಲ್ಲಿ ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿದೆ ಎಂಬುದಾಗಿ ತಿಳಿಸಿದೆ.

ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ (ಪುರುಷ) ( ಸಿಎಆರ್/ಡಿಎಆರ್) ಸಂಬಂಧಿಸಿದ ಇತರೆ ಮಾಹಿತಿ ಹೀಗಿದೆ..

  • 👉ಒಟ್ಟು ಹುದ್ದೆಗಳು 1005
  • 👉ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 20-05-2020
  • 👉ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 22-06-2020
  • 👉ಅರ್ಜಿ ಶುಲ್ಕ ಸಲ್ಲಿಸಲು ಕೊನೆಯ ದಿನಾಂಕ 25-06-2020
  • 👉ಶುಲ್ಕ ವಿವರ – ಸಾಮಾನ್ಯ ಅಭ್ಯರ್ಥಿ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ರೂ.250. ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ.100 ಆಗಿರುತ್ತದೆ.
  • 👉ವಯೋಮಿತಿ – ಕನಿಷ್ಠ 18 ವರ್ಷ. ಎಸ್ಸಿ, ಎಸ್ಟಿ, ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 27 ವರ್ಷ. ಇತರೆ ಅಭ್ಯರ್ಥಿಗಳಿಗೆ 25 ವರ್ಷ. ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷಗಳು.
  • 👉ವಿದ್ಯಾರ್ಹತೆ – ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
  • 👉ವೇತನ ಶ್ರೇಣಿ – ರೂ.23,500ರಿಂದ 47,650 ಆಗಿರುತ್ತದೆ.
  • 👉ಆಯ್ಕೆ ವಿಧಾನ – ಲಿಖಿತ ಪರೀಕ್ಷೆ ಹಾಗೂ ಲಿಖಿತ ಪರೀಕ್ಷೆಯಲ್ಲಿ ಗಳಿಸಿದಂತ ಅಂಕಗಳ ಆಧಾರದ ಮೇಲೆ 1:5 ಅನುಪಾತದಲ್ಲಿ ದೇಹದಾಢ್ಯತೆ ಪರೀಕ್ಷೆ ಮೂಲಕ ಆಯ್ಕೆ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಕಾಂಕ್ಷಿಗಳು ಇಲಾಖೆಯ ಜಾಲತಾಣ www.ksp.gov.in  ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ. ಮತ್ತೊಮ್ಮೆ ನೆನಪಿರಲಿ ದಿನಾಂಕ 20-05-2020ರಿಂದ ಅರ್ಜಿ ಸಲ್ಲಿಕೆ ಆರಂಭ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 22-06-2020 ಆಗಿರುತ್ತದೆ.

Previous article
Next article

Leave Comments

Post a Comment